ಸೆಪ್ಟೆಂಬರ್ 11, 2026
ಶುಕ್ರವಾರ

ನಮ್ಮನ್ನು ಅನುಸರಿಸಿ

Uttara-Kannada

ಸಾಂದೀಪನಿ ಶಿಷ್ಯವೇತನ ಯೋಜನೆಗೆ ಅರ್ಜಿ ಸಲ್ಲಿಸಿ!

Pakka News Web • 10 ಸೆಪ್ಟೆಂ 2026,

ಕಾರವಾರ:ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ 2026-27 ನೇ ಸಾಲಿನ ಸಾಂದೀಪನಿ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ರಾಜ್ಯ ಇ-ಆಡಳಿತ ಇಲಾಖೆಯ ರಾಜ್ಯ ಶಿಷ್ಯವೇತನ ತಂತ್ರಾಂಶ (ಎಸ್ಎಸ್ಪಿ) ಮೂಲಕ ಜಾರಿಗೊಳಿಸಲಾಗಿದೆ.

ಈ ಯೋಜನೆಗೆ ಪ್ರಥಮ, ದ್ವಿತೀಯ, ಪಿ.ಯು. ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ಪದವಿ ಕೋರ್ಸ್ಗಳನ್ನು ವ್ಯಾಸಂಗ ಮಾಡುತ್ತಿರುವ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ನಿರ್ವಹಣಾ ವೆಚ್ಚ ರೂ.15 ಸಾವಿರ ದಂತೆ ಶಿಷ್ಯವೇತನ ಪಾವತಿಸಲಾಗುವುದು.

ಸಿಇಟಿ, ನೀಟ್ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದ 2/3 ಭಾಗದ ಮೊತ್ತವನ್ನು ಮರುಪಾವತಿ ಮಾಡಲಾಗುವುದು.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರ ಹೊಂದಿರಬೇಕು. ವೃತ್ತಿಪರ ಕೋರ್ಸ್ಗಳಿಗೆ ಮ್ಯಾನೇಜ್ಮೆಂಟ್ ಕೋಟಾ ಅಥವಾ ಕಾಮೆಡ್-ಕೆ ರಡಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗೆ ಅರ್ಹರಿರುವುದಿಲ್ಲ. ವಿದ್ಯಾರ್ಥಿಗಳ ಆಧಾರ್ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಎನ್ಪಿಸಿಐ ರಡಿ ಸೀಡ್ ಆಗಿರಬೇಕು. ಅರ್ಜಿಯನ್ನು ವೆಬ್ ಸೈಟ್: www.ksbdb.karnataka.gov.in ಮುಖಾಂತರ ಸಲ್ಲಿಸಲು ಡಿಸೆಂಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ನ್ಯೂ ಕೆ.ಎಚ್.ಬಿ. ಕಾಲೋನಿ. ಹಬ್ಬುವಾಡಾ, ಕಾರವಾರ ಅಥವಾ ದೂ.ಸಂ:7975633671 ನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250