ಅಕ್ಟೋಬರ್ 28, 2026
ಬುಧವಾರ

ನಮ್ಮನ್ನು ಅನುಸರಿಸಿ

Uttara-Kannada

ಉತ್ತರ ಕನ್ನಡ ಜಿಲ್ಲಾಧಿಕಾರಿಯವರ ಇಂದಿನ ಆದೇಶದಲ್ಲಿ ಹೀಗಿದೆ!

Pakka News Web • 29 ಸೆಪ್ಟೆಂ 2026,

ಭೂಮಾಪಕ ಹುದ್ದೆಗೆ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಕಾರವಾರ:ಭೂಮಾಪನ ಮತ್ತು ಕಂದಾಯ ವ್ಯವಸ್ಥೆ ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ವೃಂದದ ಭೂಮಾಪಕರ ಹುದ್ದೆಗಳ ನೇರ ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯು ಅಕ್ಟೋಬರ್ 2 ರಂದು ಕಾರವಾರದ 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತತಾ ಭಂಗ ಆಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಗಿಯುವವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿಷೇಧಾಜ್ಞೆಯನ್ನು ಹೊರಡಿಸಿದ್ದಾರೆ.

ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿದ ಮೂಲ ವೃಂದದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯು ಅಕ್ಟೋಬರ್ 4 ರಂದು ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಈ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತತಾ ಭಂಗ ಆಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಗಿಯುವವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿಷೇಧಾಜ್ಞೆಯನ್ನು ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ಅಂದರೆ, ಮೊಬೈಲ್ ಫೋನಗಳು, ಸ್ಮಾರ್ಟ ವಾಚ್, ವೈರ್ ಲೆಸ್/ ಬ್ಲೂಟೂತ್, ಇಯರ್ ಹೆಡ್ ಫೋನ್ ಗಳನ್ನು ತರಲು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಚುನಾವಣಾ ಪ್ರಚಾರದ ಜಾಹೀರಾತುಗಳಿಗೆ ಪೂರ್ವ ಪ್ರಮಾಣೀಕರಣ ಕಡ್ಡಾಯ

ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಮಾಧ್ಯಮಗಳ ಮೂಲಕ ಪ್ರಸಾರವಾಗುವ ಜಾಹೀರಾತುಗಳ ಮೇಲೆ ನಿಗಾ ವಹಿಸಲು ಜಿಲ್ಲೆಯಲ್ಲಿ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯನ್ನು (ಎಂಸಿಎಂಸಿ) ರಚಿಸಿ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶನದಂತೆ, ಅಭ್ಯರ್ಥಿಗಳು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಟಿ.ವಿ. ಚಾನೆಲ್ಗಳು, ಕೇಬಲ್ ನೆಟ್ವರ್ಕ್, ರೇಡಿಯೋ, ಖಾಸಗಿ ಎಫ್ಎಂ ಚಾನೆಲ್ಗಳು, ಸಿನಿಮಾ ಮಂದಿರಗಳು, ಸಾರ್ವಜನಿಕ ಸ್ಥಳಗಳಲ್ಲಿನ ಆಡಿಯೋ-ವೀಡಿಯೋ ಪ್ರದರ್ಶನಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವ ಚುನಾವಣಾ ಜಾಹೀರಾತುಗಳಿಗೆ ಪೂರ್ವ ಪ್ರಮಾಣೀಕರಣ ಪಡೆಯುವುದು ಕಡ್ಡಾಯವಾಗಿದೆ. ಚುನಾವಣಾ ಪ್ರಚಾರದ ಅವಧಿಯಲ್ಲಿ ರಾಜಕೀಯ ಮುಖಂಡರು ಹಾಗೂ ಅಭ್ಯರ್ಥಿಗಳ ಪ್ರಚಾರ ಚಟುವಟಿಕೆಗಳ ಮೇಲೆ ಮತ್ತು ಪೇಯ್ಡ್ ನ್ಯೂಸ್ ಗಳ ಮೇಲೂ ಎಂಸಿಎಂಸಿ ತಂಡ ನಿಗಾ ವಹಿಸಲಿದೆ.

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ : ದೂರ ಮೇಲ್ವಿಚಾರಣಾ ಕೋಶ ಪ್ರಾರಂಭ

ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲಾ ಮಟ್ಟದಲ್ಲಿ ವಿವಿಧ ತಂಡಗಳಿ0ದ, ಸಾರ್ವಜನಿಕರಿಂದ ಹಾಗೂ ರಾಜಕೀಯ ಪಕ್ಷಗಳಿಂದ ಸ್ವೀಕೃತವಾಗುವ ಎಲ್ಲಾ ರೀತಿಯ ದೂರುಗಳ ಸ್ವೀಕೃತಿ, ಪರಿಶೀಲನೆ ಮತ್ತು ವಿಲೇವಾರಿ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ದೂರು ಮೇಲ್ವಿಚಾರಣಾ ಕೋಶವನ್ನು ರಚಿಸಿ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶಿದ್ದಾರೆ.

ಪಡಿತರ ಚೀಟಿ ಸದಸ್ಯರು ಉಚಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ : ಜಿಲ್ಲಾಧಿಕಾರಿ

ಉತ್ತರ ಕನ್ನಡ ಜಿಲ್ಲೆಯಲ್ಲಿರುವ 5,69,044 ಪಡಿತರ ಚೀಟಿ ಸದಸ್ಯರು ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿಕೊಂಡಿದ್ದು, ಪ್ರಸ್ತುತ ಅಂತಹ ಸದಸ್ಯರು ತಮ್ಮ ಇ-ಕೆವೈಸಿಯನ್ನು ಪುನಃ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೆ.27ರವರೆಗೆ 2,44,930 ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಂಡಿದ್ದು, ಇನ್ನು 3,24,114 ಫಲಾನುಭವಿಗಳ ಇ-ಕೆವೈಸಿ ಬಾಕಿ ಇರುತ್ತದೆ. ಈ ಹಿಂದೆ ಇ-ಕೆವೈಸಿ ಮಾಡಿಸಿಕೊಳ್ಳಲು ಸೆ.30 ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಅದನ್ನು ವಿಸ್ತರಿಸಿ ಅಕ್ಟೋಬರ್ 20 ರವರೆಗೆ ಕಾಲಾವಕಾಶ ನೀಡಲಾಗಿರುತ್ತದೆ. ಆದರೂ ಕೊನೆಯ ದಿನಾಂಕದವರೆಗೆ ಕಾಯದೆ, ತಕ್ಷಣವೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು.
ಇ-ಕೆವೈಸಿ ಮಾಡಿಸಿಕೊಳ್ಳದೆ ಬಾಕಿ ಉಳಿದಲ್ಲಿ, ಪಡಿತರ ಚೀಟಿಯ ಆಧಾರದ ಮೇಲೆ ಸರ್ಕಾರದಿಂದ ಪಡೆಯುತ್ತಿರುವ ವಿವಿಧ ಸೌಲಭ್ಯಗಳು ಮುಂದಿನ ದಿನಗಳಲ್ಲಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಪಡಿತರ ಚೀಟಿಯ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಯಲ್ಲಿ ಶೀಘ್ರವಾಗಿ ಭೇಟಿ ನೀಡಿ “ಉಚಿತವಾಗಿ” ಇ-ಕೆವೈಸಿ ಮಾಡಿಸಿಕೊಳ್ಳಬೇಕು ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಪ್ರಕ್ರಿಯೆಗೆ ಹಣ ಪಡೆದರೆ ಆಹಾರ ಇಲಾಖೆ ಗ್ರಾಹಕರ ಸಹಾಯವಾಣಿ 1967 ಅಥವಾ ಸಂಬಂಧಪಟ್ಟ ತಹಶೀಲ್ದಾರ ಕಚೇರಿಯ ಆಹಾರ ಶಿರಸ್ತೇದಾರ ಮತ್ತು ಆಹಾರ ನಿರೀಕ್ಷಕರಿಗೆ ದೂರು ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250