ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನೇವಲ್ ಬೇಸ್ಗೆ ಅ.16ರಂದು ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಭದ್ರತಾ ದೃಷ್ಟಿಯಿಂದ ಹಾರವಾಡದಿಂದ ಮಾಜಾಳಿವರೆಗಿನ ಸಮುದ್ರ ತೀರದಲ್ಲಿ ಮೀನುಗಾರಿಕೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅಥವಾ ಗಣ್ಯರು ಆಗಮಿಸಿ ನಿರ್ಗಮಿಸುವವರೆಗೆ ಮೀನುಗಾರಿಕೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಈ ಅವಧಿಯಲ್ಲಿ ಸಮುದ್ರ ತೀರದ ಸಂಬಂಧಿತ ಪ್ರದೇಶಗಳಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಮೀನುಗಾರಿಕೆ ಇಲಾಖೆ ಸೂಚಿಸಿದೆ.
ಮೀನುಗಾರರು ಹಾಗೂ ಮೀನುಗಾರಿಕೆ ದೋಣಿಗಳ ಮಾಲೀಕರು ಭದ್ರತಾ ದೃಷ್ಟಿಯಿಂದ ಇಲಾಖೆಯ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
