ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಸುಪಾ, ದಾಂಡೇಲಿ ತಾಲೂಕು ಬರಪೀಡಿತ ಘೋಷಣೆ

Pakka News Web • 15 ಆಕ್ಟೋ 2026,

ಕಾರವಾರ: ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸುಪಾ (ಜೋಯಿಡಾ) ಮತ್ತು ದಾಂಡೇಲಿ ತಾಲೂಕುಗಳನ್ನು ಮಧ್ಯಮ ತೀವ್ರತೆಯ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ.

ರಾಜ್ಯ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ವಿಭಾಗವು 2026ರ ಅಕ್ಟೋಬರ್ 14ರಂದು ಹೊರಡಿಸಿರುವ ಸರ್ಕಾರದ ಆದೇಶ ಸಂಖ್ಯೆ RD 586 TNR 2026ರಲ್ಲಿ ಈ ಘೋಷಣೆ ಮಾಡಲಾಗಿದೆ. ಇದರೊಂದಿಗೆ ರಾಜ್ಯದ ವಿವಿಧ ಜಿಲ್ಲೆಗಳ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಈ ಎರಡು ತಾಲೂಕುಗಳೂ ಸೇರ್ಪಡೆಯಾಗಿವೆ.

ಬೆಳಗಾವಿ ಜಿಲ್ಲೆಯ ಖಾನಾಪುರ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡುಬಿದಿರೆ ಹಾಗೂ ಮುಲ್ಕಿ ಮತ್ತು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕುಗಳನ್ನೂ ಮಧ್ಯಮ ತೀವ್ರತೆಯ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250