ಅಕ್ಟೋಬರ್ 26, 2026
ಸೋಮವಾರ

ನಮ್ಮನ್ನು ಅನುಸರಿಸಿ

Uttara-Kannada

ಹಾಲಕ್ಕಿ ಸುಗ್ಗಿ ಕಲಾವಿದ ಪುರುಷೋತ್ತಮ ಗೌಡರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ!

Pakka News Web • 19 ಆಕ್ಟೋ 2026,

ಕಾರವಾರ: ಕರ್ನಾಟಕ ಜಾನಪದ ಅಕಾಡೆಮಿಯ 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಕಾರವಾರ ತಾಲೂಕಿನ ಅಮದಳ್ಳಿಯ ಹಾಲಕ್ಕಿ ಸುಗ್ಗಿ ಕುಣಿತದ ಕಲಾವಿದ ಪುರುಷೋತ್ತಮ ಗೌಡ ಅವರು ಆಯ್ಕೆಯಾಗಿದ್ದಾರೆ.

ಜಾನಪದ ಕಲೆಗಳ ಉಳಿವು ಮತ್ತು ಬೆಳವಣಿಗೆಗೆ ಕೊಡುಗೆ ನೀಡಿದ ಕಲಾವಿದರು ಹಾಗೂ ಜಾನಪದ ಕ್ಷೇತ್ರದ ತಜ್ಞರನ್ನು ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿಯು ಪ್ರತಿವರ್ಷ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸುತ್ತದೆ. ಈ ಸಾಲಿನ ಪ್ರಶಸ್ತಿಗೆ ಪುರುಷೋತ್ತಮಗೌಡ ಅವರು ಆಯ್ಕೆಯಾಗಿರುವುದು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಸುಗ್ಗಿ ಕುಣಿತ ಕಲೆಗೆ ಸಂದ ಗೌರವವಾಗಿದೆ ಎಂದು ಪರಿಗಣಿಸಲಾಗಿದೆ.

ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಹಾಗೂ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250