ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ರಸ್ತೆ ಅಪಘಾತ: ಖ್ಯಾತ ಚರ್ಮರೋಗ ತಜ್ಞ ಸಾ*ವು!

Pakka News Web • 22 ಆಕ್ಟೋ 2026,

ಕಾರವಾರ: ರಸ್ತೆ ಮೇಲೆ ಏಕಾಏಕಿ ಅಡ್ಡ ಬಂದ ಹಸುವಿನಿಂದ ಸಂಭವಿಸಿದ ಅಪಘಾತದಲ್ಲಿ ಕಾರವಾರದ ಖ್ಯಾತ ಚರ್ಮರೋಗ ತಜ್ಞ, ಡಾ. ಸುಭಾಷ್ ತಾಂಡೇಲ್ ಮೃತಪಟ್ಟಿದ್ದಾರೆ. ಕಾರವಾರ ತಾಲೂಕಿನ ಮಾಜಾಳಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ವೈದ್ಯರ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು, ಸ್ನೇಹಿತರು ಹಾಗೂ ವೈದ್ಯಕೀಯ ವಲಯದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಡಾ. ಸುಭಾಷ್ ತಾಂಡೇಲ್ ಅವರು ಪ್ರಯಾಣಿಸುತ್ತಿದ್ದ ವಾಹನದ ಎದುರಿಗೆ ಏಕಾಏಕಿ ಹಸು ಅಡ್ಡ ಬಂದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ.

ವೈದ್ಯಕೀಯ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಡಾ. ತಾಂಡೇಲ್ ಅವರು ಕಾರವಾರದ ಜಿಲ್ಲಾ ಆಸ್ಪತ್ರೆ ಸೇರಿದಂತೆ ತಾಲ್ಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್‌)ಯಲ್ಲಿಯೂ ಸೇವೆ ಸಲ್ಲಿಸಿದ್ದರು.

ಚರ್ಮರೋಗ ತಜ್ಞರಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಅವರು, ಇತ್ತೀಚೆಗಷ್ಟೇ ಸರ್ಕಾರಿ ಸೇವೆಯಿಂದ ಸಹ ಅವರು ನಿವೃತ್ತರಾಗಿದ್ದರು. ಚಿತ್ತಾಕುಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250