ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

 ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ ಹಂಚಿ ರಾಹುಲ್ ಗಾಂಧಿ ಜನ್ಮದಿನಾಚರಣೆ

Pakka News Web • 19 ಜೂನ್ 2026,

ಕಾರವಾರ:ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ 56ನೇ ಹುಟ್ಟುಹಬ್ಬದ ಅಂಗವಾಗಿ ಕಾರವಾರ ತಾಲೂಕಿನ ತೋಡೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅರ್ಥಪೂರ್ಣ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಮತ್ತು ಕಾರವಾರ ಬೀದಿಬದಿ ವ್ಯಾಪಾರಸ್ಥರ ವತಿಯಿಂದ ಶಾಲೆಯ ಮಕ್ಕಳಿಗೆ ನೋಟ್‌ಬುಕ್ ಹಾಗೂ ಸಿಹಿತಿಂಡಿಗಳನ್ನು ವಿತರಿಸುವ ಮೂಲಕ ನೆಚ್ಚಿನ ನಾಯಕನ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಅಲಿ ಖುರೇಷಿ, ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕರು ಸೈಯದ್ ಅಶ್ರಫ್ ಖಾದ್ರಿ, ಬೀದಿಬದಿ ವ್ಯಾಪಾರಸ್ಥರ ಸಂಘದ ಜಿಲ್ಲಾಧ್ಯಕ್ಷರಾದ ಫಕೀರಪ್ಪ ಭಂಡಾರಿ ಹಾಗೂ ಬೀದಿಬದಿ ವ್ಯಾಪಾರಸ್ಥರ ತಾಲೂಕು ಮಹಿಳಾ ಅಧ್ಯಕ್ಷರಾದ ಜೀವನಾ ಪೋಕಲೆ ಉಪಸ್ಥಿತರಿದ್ದರು. ಅವರೊಂದಿಗೆ ಯುವ ಕಾಂಗ್ರೆಸ್‌ನ ಇರಾ ಮಹಾರಾಜಪೇಟ್, ಮಹಿಳಾ ಕಾಂಗ್ರೆಸ್‌ನ ತುಳಸಿ ನಾಯ್ಕ್, ಮೇಘನಾ ಕುಡ್ತಲ್ಕರ್ ಹಾಗೂ ಶಾಲೆಯ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250