ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಅಡಿಕೆ ವ್ಯಾಪಾರಿ ಆತ್ಮಹತ್ಯೆ

Pakka News Web • 21 ಜೂನ್ 2026,

ಶಿರಸಿ ಬಳಿಯ ಎಸಳೆ ಗ್ರಾಮದಲ್ಲಿ ಅಡಿಕೆ ವ್ಯಾಪಾರಿಯಾಗಿದ್ದ 56 ವರ್ಷದ ಎಲ್.ಕೆ. ಹೆಗಡೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಕಾನಗೋಡು ಗ್ರಾಮದವರಾದ ಇವರು ಎಸಳೆಯಲ್ಲಿ ವಾಸವಾಗಿದ್ದು, ವ್ಯಾಪಾರದಿಂದ ಬರುವ ಆದಾಯದಲ್ಲೇ ಕುಟುಂಬ ಮುನ್ನಡೆಸುತ್ತಿದ್ದರು.

ಮಾನಸಿಕವಾಗಿ ಅಸ್ವಸ್ಥರಾಗಿದ್ದ ಹೆಗಡೆ ಅವರು ಪದೇ ಪದೇ ಆತ್ಮಹತ್ಯೆಯ ಬಗ್ಗೆ ಮಾತನಾಡುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿದ್ದು, ಭಾನುವಾರ ತೀವ್ರ ಆಘಾತಕ್ಕೊಳಗಾದ ಅವರು ಮನೆಯ ಶೌಚಾಲಯಕ್ಕೆ ಹೋಗಿ ಬ್ಲೇಡ್‌ನಿಂದ ಕುತ್ತಿಗೆ ಕೊಯ್ದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250